Wednesday, June 3, 2026
Homeಕರಾವಳಿಬೆಳ್ತಂಗಡಿ: ಬಾಲಕಿಯ ನಗ್ನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಾತನ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಬಾಲಕಿಯ ನಗ್ನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಾತನ ವಿರುದ್ಧ ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯ ಬಾಲಕಿಯೊಬ್ಬಳ ನಗ್ನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಾತನ ವಿರುದ್ಧ ದೂರು ದಾಖಲಾಗಿದೆ.ಸವಣಾಲಿನ ನಾಗೇಶ್ ಎಂಬಾತನ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನು ಆರೋಪಿ ನಾಗೇಶ್ ಬಾಲಕಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅಲ್ಲದೇ ಆಕೆಯ ಜೊತೆ ವಾಟ್ಸಾಪ್ ಹಾಗೂ ಸ್ನ್ಯಾಪ್ ಚ್ಯಾಟ್ ನಲ್ಲಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಅಲ್ಲದೇ ವಾಟ್ಸಾಪ್ ಮೂಲಕ ಆಕೆಯ ನಗ್ನ ಫೋಟೋಗಳನ್ನು ಪಡೆದುಕೊಂಡಿದ್ದ ಎನ್ನಲಾಗಿದೆ.ಬಳಿಕ ಅದನ್ನು ವೈರಲ್ ಮಾಡೋದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೇ ಫೋಟೋವನ್ನು ಸ್ನೇಹಿತರಿಗೆ ಶೇರ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

- Advertisement -

Latest News

error: Content is protected !!