Friday, June 5, 2026
Homeಕರಾವಳಿವಿಟ್ಲ : ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಕಳ್ಳರು; ಮನೆಯಲ್ಲಿದ್ದ ನಾಯಿ ನಾಪತ್ತೆ, ಕೊಂದಿರುವ ಶಂಕೆ

ವಿಟ್ಲ : ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಕಳ್ಳರು; ಮನೆಯಲ್ಲಿದ್ದ ನಾಯಿ ನಾಪತ್ತೆ, ಕೊಂದಿರುವ ಶಂಕೆ

- Advertisement -
- Advertisement -

ವಿಟ್ಲ : ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಘಟನೆ  ಸಾಲೆತ್ತೂರು ನಿವಾಸಿ ಜಗನ್ನಾಥ್ ಅವರ ಮನೆಯಲ್ಲಿ ನಡೆದಿದೆ. ಇನ್ನು ಕಳ್ಳತನದ ಬಳಿಕ ಮನೆಯಲ್ಲಿದ್ದ ಅವರ ನಾಯಿ ನಾಪತ್ತೆಯಾಗಿದ್ದು ಕಳ್ಳರು ಕೊಂದಿರುವ ಶಂಕೆ ವ್ಯಕ್ತವಾಗಿದೆ,

ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್‌ ಹಾಗೂ ಇಬ್ಬರು ಮಕ್ಕಳು ಮಾತ್ರ ವಾಸಿಸುತ್ತಿದ್ದರು.ಆ.3ರಂದು ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಆ.4ರಂದು ವಾಪಾಸು ಹಿಂದಿರುಗಿ ಮನೆಗೆ ಬರುವ ಈ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಒಟ್ಟು 34 ಗ್ರಾಂ ನಷ್ಟು ಚಿನ್ನ ಹಾಗೂ 6000/-ರೂ ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ವಿದೇಶದ ನೋಟುಗಳು ಹಾಗೂ ನಾಣ್ಯಗಳಿದ್ದ ಡಬ್ಬವನ್ನು ಕದ್ದೊಯ್ದಿದ್ದಾರೆ. ವಿಜಯ ಅವರ ಪುತ್ರಿಯ ಶಾಲಾ ಬ್ಯಾಗ್‌ನಲ್ಲಿದ್ದ ಪುಸ್ತಕವನ್ನು ಎಸೆದು ಬ್ಯಾಗನ್ನು ಕೊಂಡೊಯ್ದಿದ್ದಾರೆ. ಕಳ್ಳತನವಾದ ಸೊತ್ತುಗಳ ಒಟ್ಟು ಮೌಲ್ಯ 1,42,000/- ರೂ ಆಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಲ್ಲದೇ ಮನೆಯನ್ನು ಕಾವಲು ಕಾಯುತ್ತಿದ್ದ ಎರಡು ಶ್ವಾನಗಳಲ್ಲಿ ಒಂದು ಶ್ವಾನ ಕಾಣೆಯಾಗಿದೆ. ಕಳ್ಳರು ನಾಯಿಯನ್ನೂ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

Latest News

error: Content is protected !!