Friday, June 5, 2026
Homeಕರಾವಳಿಸಕಲೇಶಪುರ: ಬಾಳ್ಳುಪೇಟೆ ಸಮೀಪ  ಭೂಕುಸಿತ; ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

ಸಕಲೇಶಪುರ: ಬಾಳ್ಳುಪೇಟೆ ಸಮೀಪ  ಭೂಕುಸಿತ; ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

- Advertisement -
- Advertisement -

ಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಸಮೀಪ ಭೂಕುಸಿತ ಸಂಭವಿಸಿದ್ದು ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ ವಾಗಿದೆ.

ರೈಲ್ವೆ ಟ್ರ್ಯಾಕ್ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣು ಬಿದ್ದಿದೆ. ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾದೆ. ಮಣ್ಣು ತೆರವು ಕಾರ್ಯಾಚರಣೆ ಇದೀಗ ಆರಂಭಿಸಲಾಗಿದೆ.

- Advertisement -

Latest News

error: Content is protected !!