Friday, June 5, 2026
Homeತಾಜಾ ಸುದ್ದಿಮೂಡಬಿದಿರೆ; ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆ

ಮೂಡಬಿದಿರೆ; ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆ

- Advertisement -
- Advertisement -

ಮೂಡಬಿದಿರೆ; ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆ ಮಾಡಿರುವ ಘಟನೆ ಮೂಬಿದಿರೆಯಲ್ಲಿ ನಡೆದಿದೆ. ಆರೋಪಿ ಮಂಜುನಾಥ್ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮತ್ತು ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದು, ಇಬ್ಬರೂ ಆತ್ಮೀಯರಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಆರೋಪಿ ಮಂಜುನಾಥ್ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಸೋಮವಾರ ಕಾಲೇಜಿಗೆ ತೆರಳಿ ತರಗತಿಯೊಳಗೆ ಅಕ್ರಮವಾಗಿ ಪ್ರವೇಶಿಸಿ ಕತ್ತರಿಯಿಂದ ಚುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಡಬಿದಿರೆ ಠಾಣೆಯಲ್ಲಿ ಆರೋಪಿ ಮಂಜುನಾಥನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಇನ್‌ಸ್ಪೆಕ್ಟರ್ ಸಂದೇಶ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!