Sunday, August 30, 2026
Homeಕರಾವಳಿಮಂಗಳೂರುಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ನಫೀಜಾ ಸೇರಿ 6 ಮಹಿಳಾ ಗ್ರಾ.ಪಂ. ಅಧ್ಯಕ್ಷೆಯರಿಗೆ ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ...

ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ನಫೀಜಾ ಸೇರಿ 6 ಮಹಿಳಾ ಗ್ರಾ.ಪಂ. ಅಧ್ಯಕ್ಷೆಯರಿಗೆ ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಆಹ್ವಾನ

- Advertisement -
- Advertisement -

ಬೆಂಗಳೂರು: ನವದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ರಾಜ್ಯದ
ಆರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಆಹ್ವಾನ ನೀಡಲಾಗಿದೆ.

ಆರು ಮಹಿಳಾ ಗ್ರಾಮ ಪಂಚಾಯತ್ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿದ್ದು, ಇಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಜಾ,‌ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೆದರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮಿ ನರಸಮ್ಮ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಿ ಪಿ.ಟಿ. ಮತ್ತು ಚಾಮರಾಜನಗರ ತಾಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಿವಮ್ಮ ದೆಹಲಿಯಲ್ಲಿ ಇಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ. ರಮೇಶ್ ನೇತೃತ್ವದಲ್ಲಿ ವಿಶೇಷ ಆಹ್ವಾನಿತ ಆರು ಗ್ರಾಮ ಪಂಚಾಯತ್ ಅಧ್ಯಕ್ಷರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

Latest News

error: Content is protected !!