Friday, June 5, 2026
Homeಕರಾವಳಿಉಡುಪಿಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ; ಜಿಲ್ಲಾ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಧ್ವಜಾರೋಹಣ

ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ; ಜಿಲ್ಲಾ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಧ್ವಜಾರೋಹಣ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ಬಳಿಕ ತೆರೆದ ವಾಹನದಲ್ಲಿ ಪೆರೇಡ್ ವೀಕ್ಷಣೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೌರವ ವಂದನೆ ಸ್ವೀಕರಿಸಿದರು‌.

ಸಮಾರಂಭದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಉಪಸ್ಥಿತರಿದ್ದರು.

ಅಲ್ಲದೇ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಮುಖಂಡ ಉದಯ್ ಕುಮಾರ್ ಶೆಟ್ಟಿ ಕೂಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!