Friday, June 5, 2026
Homeಕರಾವಳಿಬೆಳ್ತಂಗಡಿ : ಪಿಕಪ್ - ಬೈಕ್ ಅಪಘಾತದಲ್ಲಿ ಗಾಯಗೊಂಡ ಅಪ್ರಾಪ್ತ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ...

ಬೆಳ್ತಂಗಡಿ : ಪಿಕಪ್ – ಬೈಕ್ ಅಪಘಾತದಲ್ಲಿ ಗಾಯಗೊಂಡ ಅಪ್ರಾಪ್ತ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಆ.13ರಂದು ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಖಾಸಗಿ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಆ.17 ರಂದು ಶನಿವಾರ ಬೆಳಗ್ಗಿನ ಜಾವ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಂಜೊಟ್ಟು ನಿವಾಸಿ ಉಮೇಶ್- ಕವಿತಾ ದಂಪತಿಯ ಎರಡನೇ ಪುತ್ರ ಜೀವ ಉಮೇಶ್(16) ಎಂಬವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿನನ್ನು ಅಗಲಿದ್ದಾರೆ.ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!