Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಸುರಕ್ಷತೆ ಬಗ್ಗೆ ಚರ್ಚಿಸಲು ಮಂಗಳವಾರ ವೈದ್ಯರು ಮತ್ತು ಆಸ್ಪತ್ರೆ ಮಾಲೀಕರ ಜೊತೆ ಸಭೆ; ಆರೋಗ್ಯ...

ಮಂಗಳೂರು: ಸುರಕ್ಷತೆ ಬಗ್ಗೆ ಚರ್ಚಿಸಲು ಮಂಗಳವಾರ ವೈದ್ಯರು ಮತ್ತು ಆಸ್ಪತ್ರೆ ಮಾಲೀಕರ ಜೊತೆ ಸಭೆ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

- Advertisement -
- Advertisement -

ಮಂಗಳೂರು: ಕೋಲ್ಕತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಮಂಗಳವಾರ ರಾಜ್ಯ ಸರ್ಕಾರದ ಜೊತೆ ಎಲ್ಲಾ ವೈದ್ಯರು ಮತ್ತು ಆಸ್ಪತ್ರೆ ಮಾಲೀಕರ ಸಭೆ ನಡೆಯಲಿದೆ.

ಮಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಭೆಯಲ್ಲಿ ಸುರಕ್ಷತಾ ಕ್ರಮಗಳನ್ನು ಏನೇನು ತೆಗೆದುಕೊಳ್ಳಬೇಕು ಅಂತಾ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ತುರ್ತು ಸೇವೆಗಳು ಎಲ್ಲಾ ಆಸ್ಪತ್ರೆಗಳಲ್ಲಿ ಇರುತ್ತವೆ ಎಂದು ಹೇಳಿರುವ ಆರೋಗ್ಯ ಸಚಿವರು,
ಓಪಿಡಿ ಮಾತ್ರ ಇಂದು ಬಂದ್ ಇರುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಪ್ರತಿಭಟನೆ ಸರಿಯಲ್ಲ ಅಂತಾ ಹೇಳಲ್ಲ ಎಂದು ಹೇಳಿರುವ ಸಚಿವ ದಿನೇಶ್ ಗುಂಡೂರಾವ್, ‌ ಒಳ್ಳೆಯ ಉದ್ದೇಶದಿಂದ ಮಾಡುತ್ತಿದ್ದಾರೆ, ಕೆಲಸ ಮಾಡಲು ಭಯದ ವಾತಾವರಣ ಇರಬಾರದು ಎಂದಿದ್ದಾರೆ.

ರಕ್ಷಣೆ ಕೊಡಿಸುವುದು ನಮ್ಮ ಜವಾಬ್ದಾರಿ ಹಾಗೂ ಕರ್ತವ್ಯವಾಗಿದ್ದು,‌ ಸುರಕ್ಷತೆ ಹಾಗೂ ಭದ್ರತೆ ಬಗ್ಗೆ ರಾಜ್ಯ ಸರ್ಕಾರ ಹೆಚ್ಚು ಚಿಂತಿಸುತ್ತದೆ ಎಂದೂ ಆರೋಗ್ಯ ಸಚಿವರು ತಿಳಿಸಿದ್ದಾರೆ.

- Advertisement -

Latest News

error: Content is protected !!