Sunday, June 7, 2026
Homeಕರಾವಳಿಉಡುಪಿಉಡುಪಿ: ಕೋಲ್ಕತ್ತಾ ವೈದ್ಯೆ ಕೊಲೆ ಪ್ರಕರಣ; ಜಿಲ್ಲಾದ್ಯಂತ ಎಲ್ಲಾ ಒಪಿಡಿ ಬಂದ್

ಉಡುಪಿ: ಕೋಲ್ಕತ್ತಾ ವೈದ್ಯೆ ಕೊಲೆ ಪ್ರಕರಣ; ಜಿಲ್ಲಾದ್ಯಂತ ಎಲ್ಲಾ ಒಪಿಡಿ ಬಂದ್

- Advertisement -
- Advertisement -

ಉಡುಪಿ: ಕೋಲ್ಕತಾದಲ್ಲಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿಯೂ ಇಂದು ವೈದ್ಯರ ಪ್ರತಿಭಟನೆ ನಡೆಯಿತು.

ವೈದ್ಯರ ಪ್ರತಿಭಟನೆಗೆ ಐಎಂಎ ಸಂಘಟನೆ ಬೆಂಬಲ ವ್ಯಕ್ತಪಡಿಸಿದ್ದು, ಉಡುಪಿ ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿತ್ತು.

ತುರ್ತು ಸೇವೆಗಳನ್ನು ಹೊರತು ಪಡಿಸಿ ಬಹುತೇಕ ಎಲ್ಲಾ ಸೇವೆಗಳು ಬಂದ್ ಆಗಿದ್ದು ಒಳ ರೋಗಿಗಳಿಗೆ, ಹೆರಿಗೆ ಹಾಗೂ ತುರ್ತು ಚಿಕಿತ್ಸಾ ಸೇವೆಗಳು ಲಭ್ಯವಿದ್ದವು.

ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದೆ.ಕೋಲ್ಕತ್ತಾ ಘಟನೆ ವಿರೋಧಿಸಿ ದೇಶಾದ್ಯಂತ ಇಂದು ವೈದ್ಯರು ಮುಷ್ಕರ ನಡೆಸಿದ್ದರು.

- Advertisement -

Latest News

error: Content is protected !!