Wednesday, June 3, 2026
Homeತಾಜಾ ಸುದ್ದಿಸುದ್ದಿಗೋಷ್ಟಿ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಕಾಂಗ್ರೆಸ್ ಕಾರ್ಯಕರ್ತ ಸಾವು

ಸುದ್ದಿಗೋಷ್ಟಿ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಕಾಂಗ್ರೆಸ್ ಕಾರ್ಯಕರ್ತ ಸಾವು

- Advertisement -
- Advertisement -

ಬೆಂಗಳೂರು; ಸುದ್ದಿಗೋಷ್ಟಿ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನು ವಿರೋಧಿಸಿ ಇಂದು  ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.  ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆಯೆ ಕಾಂಗ್ರೆಸ್ ಕಾರ್ಯಕರ್ತ ನಿಗೆ ಹೃದಯಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಿ ಕೆ ರವಿಚಂದ್ರನ್ ಮೃತ ಕಾಂಗ್ರೆಸ್ ಕಾರ್ಯಕರ್ತ. ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ವೇಳೆ ಸಿ ಕೆ ರವಿಚಂದ್ರನ್ ಗೆ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿಸಲಾಗಿದೆ. ಆದರೆ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!