Wednesday, June 3, 2026
Homeಅಪರಾಧಪ್ರಧಾನ ಮಂತ್ರಿ ಮೋದಿಗೆ ಅವಮಾನ; ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರು

ಪ್ರಧಾನ ಮಂತ್ರಿ ಮೋದಿಗೆ ಅವಮಾನ; ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರು

- Advertisement -
- Advertisement -

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.

ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯಲ್ಲಿ ರಕ್ಷಿತ್ ಶಿವರಾಂ ಆ.19ರಂದು, ಪ್ರಧಾನಿ ಯವರೇ ನೀವು ಒಂದು ವಿಚಾರವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!