Saturday, June 6, 2026
Homeಕರಾವಳಿಮಂಗಳೂರು: ಎಂಎಲ್ಸಿ ಐವಾನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು: ಎಂಎಲ್ಸಿ ಐವಾನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

- Advertisement -
- Advertisement -

ಮಂಗಳೂರು: ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.ಮಂಗಳೂರಿನ ವೇಲೆನ್ಸಿಯಾದಲ್ಲಿರುವ ಮನೆಗೆ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗಿದೆ.

ನಿನ್ನೆ ರಾತ್ರಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮನೆಯ ಕಿಟಕಿಗೆ ಕಲ್ಲು ತಗುಲಿದ್ದು ಯಾವುದೇ ಹಾನಿ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.ರಾಜ್ಯಪಾಲರ ಕುರಿತಾದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.

- Advertisement -

Latest News

error: Content is protected !!