Saturday, June 6, 2026
Homeಅಪರಾಧಪ್ರಕರಣವೊಂದಕ್ಕೆ ಸಂಬಂಧಿಸಿ 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪ್ರಕರಣವೊಂದಕ್ಕೆ ಸಂಬಂಧಿಸಿ 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಣಿಪಾಲ: ಕಳೆದ 32 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಬಡಗಬೆಟ್ಟು ಮಣಿಪಾಲ ನಿವಾಸಿ ಗಣೇಶ್‌ ಪ್ರಭು (54).

ಶಿವರಾಮ ಎಂಬವರು 1992ರ ಫೆ. 13ರಂದು ನೀಡಿದ ದೂರಿನಂತೆ ಆತನ ವಿರುದ್ಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆತ 2001ರಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ನ್ಯಾಯಾಲಯ ವಾರಂಟ್‌ ಹೊರಡಿಸಿತ್ತು. ಇದೀಗ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಿ ಗಣೇಶ್‌ ಪ್ರಭು ಬೆಂಗಳೂರಿನಲ್ಲಿ ಇರುವುದನ್ನು ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಘವೇಂದ್ರ ಸಿ. ಮತ್ತು ಎಚ್‌ಸಿ ಪ್ರಸನ್ನ ಉಪ್ಪೂರು ಅವರು ಪತ್ತೆ ಮಾಡಿ ಅಲ್ಲಿಂದ ಆ. 21ರಂದು ಬಂಧಿಸಿ ಉಡುಪಿಗೆ ಕರೆತಂದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!