- Advertisement -
![]()
- Advertisement -
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಅಧಿಕಾರಿಗಳು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 2,144 ಪುಟಗಳ ಚಾರ್ಜ್ ಶೀಟ್ ಅನ್ನು ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಹಾಸನದ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್‌ಐಟಿ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಎಸ್‌ಐಟಿಯ ತನಿಖಾಧಿಕಾರಿ ಸುಮರಾಣಿಯವರು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ 2,144 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಇದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸಲ್ಲಿ ಸಲ್ಲಿಸಿದ ಮೊದಲ ಚಾರ್ಜ್ ಶೀಟ್ ಆಗಿದೆ.
- Advertisement -


