Saturday, June 13, 2026
Homeಕರಾವಳಿಪುತ್ತೂರು: ಆರ್ಯಾಪಿನಲ್ಲಿ ಅಂಗಡಿಯೊಂದಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಪುತ್ತೂರು: ಆರ್ಯಾಪಿನಲ್ಲಿ ಅಂಗಡಿಯೊಂದಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು

- Advertisement -
- Advertisement -

ಪುತ್ತೂರು: ಆರ್ಯಾಪಿನಲ್ಲಿ ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

ದೊಡ್ಡಡ್ಕ ನಿವಾಸಿ ಸಂಕಪ್ಪ ಪೂಜಾರಿ ಎಂಬವರಿಗೆ ಸೇರಿದ ಅಂಗಡಿಗೆ ಬೆಂಕಿ ಹಚ್ಚಿದ್ದಾರೆ.ಸಂಕಪ್ಪ ಪೂಜಾರಿ ಅವರು ಇಲ್ಲಿ ಸಣ್ಣ ಗೂಡಂಗಡಿ ಮತ್ತು ಟೀ ಸ್ಟಾಲ್ ಜೊತೆಯಾಗಿ ನಡೆಸುತ್ತಿದ್ದರು. ಪ್ರತಿದಿನ ಸಂಜೆಯ ತನಕ ವ್ಯಾಪಾರ ನಡೆಸುತ್ತಿದ್ದ ಅವರು ಬಳಿಕ ಅಂಗಡಿ ಬಂದ್ ಮಾಡಿ ಮನೆಗೆ ತೆರಳುತ್ತಿದ್ದರು. ಎಂದಿನಂತೆ ಗುರುವಾರವೂ ಸಂಜೆಗೆ ಅಂಗಡಿ ಬಂದ್ ಮಾಡಿ ಮನೆಗೆ ತೆರಳಿದ್ದರು. ತಡರಾತ್ರಿ ಯಾರೋ ಅಂಗಡಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಅಂಗಡಿಯಲ್ಲಿನ ಸೊತ್ತುಗಳು ಸಂಪೂರ್ಣ ಸುಟ್ಟು ಹೋಗಿದ್ದು ಹಾನಿಯಾಗಿದೆ.

ಸಂಪ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!