ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಹಾಗೂ ಶ್ರೀ ದುರ್ಗಾಶಕ್ತಿ ಮಹಿಳಾ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಪೂಜೆ, ಮೊಸರು ಕುಡಿಕೆ ಉತ್ಸವ ಹಾಗೂ ಗ್ರಾಮೀಣ ಕ್ರೀಡಾಕೂಟ ಕಾರ್ಯಕ್ರಮವನ್ನು ದಿನಾಂಕ 26-08-2024ನೇ ಸೋಮವಾರದಂದು ಚಿರಂಜೀವಿ ಯುವಕ ಮಂಡಲದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.

33ನೇ ವರ್ಷದ ಶ್ರೀ ಕೃಷ್ಣ ಪೂಜೆ, ಮೊಸರು ಕುಡಿಕೆ ಉತ್ಯವದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳನ್ನು ಗ್ರಾಮ ಮಟ್ಟದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಬೆಳಿಗ್ಗೆ 9 ಗಂಟೆಗೆ ಚಿರಂಜೀವಿ ಯುವಕ ಮಂಡಲದ ಸ್ಥಾಪಕ ಸದಸ್ಯ ದಾಮೋದರ ಗೌಡ, ಗುಂಡೂರು ಅವರು ದೀಪ ಪ್ರಜ್ವಲನೆ ಮುಖೇನ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಕೊಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ವಿಜಯ ಪೂಜಾರಿ ದೇವಸ ಕಾಜೂರು ಉಪಸ್ಥಿತರಿರುವವರು.ಮೊಸರು ಕುಡಿಕೆ ಉತ್ಸವದಲ್ಲಿ ಪೂಜಾ ಕಾರ್ಯಕ್ರಮಗಳು ಕೂಡ ನಡೆಯಲಿದ್ದು, ಸಾರ್ವಜನಿಕರಲ್ಲಿ ಶ್ರೀ ಕೃಷ್ಣನಿಗೆ ಪ್ರಿಯವಾದ ತುಳಸಿ ಮತ್ತು ಸಿಹಿತಿಂಡಿಗಳನ್ನು ಅರ್ಪಿಸುವಂತೆ ಕಾನರ್ಪ, ಕಡಿರುದ್ಯಾವರ ಚಿರಂಜೀವಿ ಯುವಕ ಮಂಡಲದ (ರಿ) ಅಧ್ಯಕ್ಷರು/ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


