Sunday, June 7, 2026
Homeಕರಾವಳಿಕಡಬ:ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

ಕಡಬ:ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

- Advertisement -
- Advertisement -

ಕಡಬ:ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಕೋಡಿಂಬಾಳ ನಿವಾಸಿ ಚೋಮ(40) ಚೋಮ ಮೃತ ದುರ್ದೈವಿ.

ಚೋಮ ಅವರು ಕಡಬ ಪೇಟೆಯಲ್ಲಿ ಗೂಡಂಗಡಿ ಹೊಂದಿದ್ದು ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದರು.ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸುವ ವೇಳೆ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!