Saturday, June 6, 2026
Homeಕರಾವಳಿಉಡುಪಿಕಾಪು ಪುರಸಭೆ ಅಧ್ಯಕ್ಷರಾಗಿ ಹರಿಣಾಕ್ಷಿ, ಉಪಾಧ್ಯಕ್ಷರಾಗಿ ಸರಿತಾ ಆಯ್ಕೆ

ಕಾಪು ಪುರಸಭೆ ಅಧ್ಯಕ್ಷರಾಗಿ ಹರಿಣಾಕ್ಷಿ, ಉಪಾಧ್ಯಕ್ಷರಾಗಿ ಸರಿತಾ ಆಯ್ಕೆ

- Advertisement -
- Advertisement -

ಕಾಪು: ಕಾಪು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹರಿಣಾಕ್ಷಿ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಅವರು 16 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಕಾಪು ಪುರಸಭೆಯ ಅಧ್ಯಕ್ಷ ಹುದ್ದೆಯು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಹುದ್ದೆಯು ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಕಟವಾಗಿದ್ದು, ಬಿಜೆಪಿ -12, ಕಾಂಗ್ರೆಸ್ -7, ಎಸ್‌ಡಿಪಿಐ -3, ಜೆಡಿಎಸ್ -1 ಸದಸ್ಯ ಬಲವನ್ನು ಹೊಂದಿದ್ದು, ಶಾಸಕ, ಸಂಸದ ಮತ್ತು ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ 16 ಮತಗಳನ್ನು ಹೊಂದಿತ್ತು.

ಕಾಪು ತಹಶೀಲ್ದಾರ್ ಡಾ.‌ಪ್ರತಿಭಾ‌ ಆರ್. ಚುನಾವಣಾಧಿಕಾರಿಯಾಗಿ ಚುನಾವಣೆ ನಡೆಸಿಕೊಟ್ಟರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು‌.

ವಿಜೇತ ಅಭ್ಯರ್ಥಿಗಳಿಗೆ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಬಿಜೆಪಿ ಚುನಾವಣಾ ವೀಕ್ಷಕರಾಗಿದ್ದ ಮನೋಹರ ಕಲ್ಮಾಡಿ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಯುವ ಮೋರ್ಚಾ ಅಧ್ಯಕ್ಷ ಸೋನು‌ ಪಾಂಗಾಳ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್, ಪಕ್ಷದ ವಿವಿಧ ಸ್ತರಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪುರಸಭಾ ಸದಸ್ಯರು ಶುಭ ಹಾರೈಸಿದರು.

- Advertisement -

Latest News

error: Content is protected !!