- Advertisement -
![]()
- Advertisement -
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿರುವ ಕೆಸೆಟ್- 2024(ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ)ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಆಗಸ್ಟ್ 28ರವರೆಗೆ ಅವಕಾಶ ನೀಡಲಾಗಿದ್ದು, ಇದೀಗ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಎರಡನೇ ಬಾರಿಗೆ ಮುಂದೂಡಿದಂತಾಗಿದೆ.
ಕೆಇಎ ಈ ಕುರಿತಂತೆ ಈಗ ನೀಡಿರುವ ಕೊನೆ ಅವಕಾಶವನ್ನು ಮತ್ತೆ ನೀಡಲಾಗುವುದಿಲ್ಲ. ಇದು ಕೊನೆಯ ಅವಕಾಶ. ಶುಲ್ಕ ಪಾವತಿಸಲು ಸೆಪ್ಟೆಂಬರ್ 3ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
- Advertisement -


