Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ:ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ:ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ತನಿಖೆ ಪೂರ್ಣಗೊಂಡ ಹಿನ್ನಲೆಯಲ್ಲಿ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಆ.20 ರಂದು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ  ಆಳಿಯ ರಾಘವೇಂದ್ರ ಕೆದಿಲಾಯ(53) ಮತ್ತು ಮೊಮ್ಮಗ ಮುರಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ಬಂಧಿಸಿದ್ದಾರೆ. ಆದರೆ ಅಂದು ರಾತ್ರಿ ರಜೆ ಇದ್ದ ಕಾರಣದಿಂದ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದರು‌. ಆ.27 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಕೇಳಿದ್ದು ನ್ಯಾಯಾಧೀಶರು ಐದು ದಿನ ಆ.31 ರವರೆಗೆ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದರು.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರು ಕೊಲೆಗೆ ಬಳಸಿದ ಬೈಕ್ ,ಬಟ್ಟೆ, ಕತ್ತಿಯನ್ನು ವಶಕ್ಕೆ ಪಡೆದುಕೊಂಡು ನಾಲ್ಕು ದಿನದಲ್ಲಿ ಆರೋಪಿಗಳ ತನಿಖೆಯನ್ನು ಪೂರ್ಣಗೊಳಿಸಿ ಆ.30 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು. ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದಾರೆ.

- Advertisement -

Latest News

error: Content is protected !!