Saturday, June 6, 2026
Homeತಾಜಾ ಸುದ್ದಿಕೋವಿಡ್ ನಿರ್ವಹಣೆಯಲ್ಲಿ ಅಕ್ರಮ ಆರೋಪ; ಜಸ್ಟಿನ್ ಡಿಕುನ್ಹಾ ಆಯೋಗದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ

ಕೋವಿಡ್ ನಿರ್ವಹಣೆಯಲ್ಲಿ ಅಕ್ರಮ ಆರೋಪ; ಜಸ್ಟಿನ್ ಡಿಕುನ್ಹಾ ಆಯೋಗದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಹಗರಣ ಆರೋಪದ ಕುರಿತು ರಾಜ್ಯ ಸರ್ಕಾರಕ್ಕೆ ಇಂದು ತನಿಖಾ ವರದಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ಮುಚ್ಚಿದ ಪೆಟ್ಟಿಗೆಯಲ್ಲಿ ತನಿಖಾ ವರದಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜ್ ಮತ್ತು ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ವೆಂಟಿಲೇಟರ್‌ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ‍್ಯಾಪಿಡ್‌ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು.

ನಂತರ ಸಿದ್ದರಾಮಯ್ಯ ಸರ್ಕಾರ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಿತ್ತು.ಹಾಲಿ ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಕೋವಿಡ್ ಅವಧಿಯಲ್ಲಿ ರಾಜ್ಯದ ಆರೋಗ್ಯ ಸಚಿವರಾಗಿದ್ದರು.

- Advertisement -

Latest News

error: Content is protected !!