Tuesday, June 9, 2026
Homeಕರಾವಳಿಉಡುಪಿಸಾಂಪ್ರದಾಯಿಕ ಮೀನುಗಾರಿಕೆ ವೇಳೆ ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಣೆ

ಸಾಂಪ್ರದಾಯಿಕ ಮೀನುಗಾರಿಕೆ ವೇಳೆ ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಣೆ

- Advertisement -
- Advertisement -

ಉಡುಪಿ: ಕಾಪು ಬೀಚ್ ನಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ಸೆ.1ರ ರವಿವಾರದಂದು ನಡೆದಿದೆ.

ಸ್ಥಳೀಯ ಮೀನುಗಾರರಿಂದ ರಕ್ಚಿಸಲ್ಪಟ್ಟ ಯುವಕ ಕಾಪು ಪಡುಗ್ರಾಮದ ನಿವಾಸಿ ಸಚಿನ್ (31) ಎನ್ನಲಾಗಿದೆ.

ರವಿವಾರದಂದು ಸಚಿನ್ ಅವರು ಸಾಂಪ್ರದಾಯಿಕ ಮೀ‌ನುಗಾರಿಕೆಗಾಗಿ ಬಲೆ ಇಡಲೆಂದು ಬಲೆಯೊಂದಿಗೆ ತೆರಳಿದ್ದು, ಈ ವೇಳೆಯಲ್ಲಿ ಸಚಿನ್ ಅವರಿಗೆ ಸಮುದ್ರ ಪಾಲಾಗುವ ಭೀತಿ ಎದುರಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಬೊಬ್ಬೆ ಹಾಕಿದ್ದು, ಮೀನುಗಾರಿಕಾ ವೃತ್ತಿನಿರತರಾದ ಶರ್ಮಾ, ಹರೀಶ್ ಕರ್ಕೇರ ಅವರು ಸಮುದ್ರಕ್ಕೆ ಇಳಿದು ಯುವಕನ‌ ಜೀವ ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!