Saturday, June 6, 2026
Homeಕರಾವಳಿಪುತ್ತೂರಿನಲ್ಲಿ ಆಂಬ್ಯುಲೆನ್ಸ್- ಕಂಟೈನರ್ ಮಧ್ಯೆ ಅಪಘಾತ; ಘಟನೆಯಲ್ಲಿ ಮಗು ಸಹಿತ ಐದು ಮಂದಿಗೆ ಗಾಯ

ಪುತ್ತೂರಿನಲ್ಲಿ ಆಂಬ್ಯುಲೆನ್ಸ್- ಕಂಟೈನರ್ ಮಧ್ಯೆ ಅಪಘಾತ; ಘಟನೆಯಲ್ಲಿ ಮಗು ಸಹಿತ ಐದು ಮಂದಿಗೆ ಗಾಯ

- Advertisement -
- Advertisement -

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್‌ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಸೆ.2ರಂದು ಸಂಜೆ ನಡೆದಿದೆ.

ಆಂಬ್ಯುಲೆನ್ಸ್ ನಲ್ಲಿ ಜಯಪ್ರಕಾಶ್ ಎಂಬವರು ಮಗುವೊಂದನ್ನು ಚಿಕಿತ್ಸೆಗಾಗಿ ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಇನ್ನೊಂದು ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕಂಟೈನರ್ ಚಾಲಕ ಜೆಸಿಬಿಯೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಿಂದ ಆಂಬ್ಯುಲೆನ್ಸ್ ನ ಮುಂಭಾಗ ನಜ್ಜುಗುಜ್ಜಾಗಿದ್ದು ಕಂಟೈನರ್‌ಗೂ ಹಾನಿ ಉಂಟಾಗಿದೆ.

ರಸ್ತೆ ಸಂಚಾರಕ್ಕೆ ಅಪಘಾತ ಸಂಭವಿಸಿದ ವೇಳೆ ತೊಡಕುಂಟಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಸಂಪ್ಯ ಪೊಲೀಸ್ ಠಾಣಾ ಎಸ್ಸೈ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!