Wednesday, June 3, 2026
Homeತಾಜಾ ಸುದ್ದಿಸಿಎಂ ವಿರುದ್ಧದ ಮುಡಾ ಸೈಟ್ ಪ್ರಕರಣ; ಸೆ. 9 ಕ್ಕೆ ಮುಂದಿನ ವಿಚಾರಣೆ ನಿಗದಿ

ಸಿಎಂ ವಿರುದ್ಧದ ಮುಡಾ ಸೈಟ್ ಪ್ರಕರಣ; ಸೆ. 9 ಕ್ಕೆ ಮುಂದಿನ ವಿಚಾರಣೆ ನಿಗದಿ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 9ರ ವರೆಗೆ ಹೈಕೋರ್ಟ್ ಮುಂದೂಡಿದೆ.

ಸೆಪ್ಟೆಂಬರ್ 9 ರಂದು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡನೆ ಮಾಡಲಿದ್ದು, ಸೆಪ್ಟೆಂಬರ್ 12 ರಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಲಿದ್ದಾರೆ.

ಹೀಗಾಗಿ ಸೆಪ್ಟೆಂಬರ್ 9 ರವರೆಗೆ ಸಿಎಂ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಿದಂತಾಗಿದ್ದು, ಮಧ್ಯಂತರ ಆದೇಶವನ್ನು ಕೋರ್ಟ್ ವಿಸ್ತರಣೆ ಮಾಡಿದೆ.

ಪ್ರಕರಣದ ಸಂಪೂರ್ಣ ವಿಚಾರಣೆಯನ್ನು ಸೆಪ್ಟೆಂಬರ್ 12 ರಂದು ಮುಗಿಸೋಣ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದ್ದು, ಅಂದೇ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯವಾಗುವ ಸಾಧ್ಯತೆ ಇದೆ.

ಇಂದು ಹೈಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ದೂರುದಾರರ ಪರ ವಕೀಲ‌ ಕೆ.ಜಿ. ರಾಘವನ್ ವಾದಿಸಿದ್ದು, ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದ್ದರು.

- Advertisement -

Latest News

error: Content is protected !!