Saturday, June 6, 2026
Homeಕರಾವಳಿಮಂಗಳೂರುಮಂಗಳೂರು; ರೈಲ್ವೇ ನಿಲ್ದಾಣದ ರಿಕ್ಷಾ ಪಾರ್ಕ್ ಕ್ಯೂನಲ್ಲಿದ್ದಾಗಲೇ ಹೃದಯಾಘಾತವಾಗಿ ಆಟೋ ಡ್ರೈವರ್ ಸಾವು

ಮಂಗಳೂರು; ರೈಲ್ವೇ ನಿಲ್ದಾಣದ ರಿಕ್ಷಾ ಪಾರ್ಕ್ ಕ್ಯೂನಲ್ಲಿದ್ದಾಗಲೇ ಹೃದಯಾಘಾತವಾಗಿ ಆಟೋ ಡ್ರೈವರ್ ಸಾವು

- Advertisement -
- Advertisement -

ಮಂಗಳೂರು; ರೈಲ್ವೇ ನಿಲ್ದಾಣದ ರಿಕ್ಷಾ ಪಾರ್ಕ್ ಕ್ಯೂನಲ್ಲಿದ್ದಾಗಲೇ ಹೃದಯಾಘಾತವಾಗಿ ಆಟೋ ಡ್ರೈವರ್ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸೆಂಟ್ರಲ್ ರೈಲ್ವೇ ಸ್ಟೇಷನ್ ನ ರಿಕ್ಷಾ ಪಾರ್ಕ್ ನಲ್ಲಿ ನಡೆದಿದೆ

ಮೂಲತಃ ಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಮೃತ ಚಾಲಕ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರು ಪತ್ನಿ, ಮೂರು ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!