- Advertisement -
![]()
- Advertisement -
ಪುತ್ತೂರು: ಪುತ್ತೂರು ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ನಗರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಲೀಲಾವತಿ ಕೃಷ್ಣನಗರ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಕೆಮ್ಮಿಂಜೆ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಇದೇ ವೇಳೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಪುತ್ತೂರು ಮಂಡಲ ಪದಾಧಿಕಾರಿಗಳು ಹಾಗೂ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
- Advertisement -


