Wednesday, June 3, 2026
Homeತಾಜಾ ಸುದ್ದಿಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜ್ಯ ಸರ್ಕಾರ; ನಿಯಂತ್ರಣ ನಿಯಮ ಪಾಲಿಸದಿದ್ದರೆ 200 ರಿಂದ...

ಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜ್ಯ ಸರ್ಕಾರ; ನಿಯಂತ್ರಣ ನಿಯಮ ಪಾಲಿಸದಿದ್ದರೆ 200 ರಿಂದ 2000 ರೂಪಾಯಿ ವರೆಗೆ ದಂಡ

- Advertisement -
- Advertisement -

ಬೆಂಗಳೂರು: ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿರುವ ಬಗ್ಗೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸದವರಿಗೆ ದಂಡ ಬೀಳಲಿದೆ.

ಡೆಂಗ್ಯೂ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂಪಾಯಿ ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುತ್ತದೆ.

ಅಲ್ಲದೇ ಶಾಲೆ, ಕಾಲೇಜು, ಹೊಟೆಲ್, ಲಾಡ್ಜ್, ರೆಸಾರ್ಟ್ ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ ಪ್ರದೇಶಗಳಲ್ಲಿ 1000 ರೂಪಾಯಿ ದಂಡ ನಿಗದಿಪಡಿಸಲಾಗಿದೆ.

ಕಟ್ಟಡ ನಿರ್ಮಾಣ, ಹೊರಾಂಗಣ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ 1000 ರೂಪಾಯಿ ಹಾಗೂ ನಗರ ಪ್ರದೇಶಗಳಲ್ಲಿ 2000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರವನ್ನು ನೀಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅವಕಾಶವಾಗಲಿದೆ.

- Advertisement -

Latest News

error: Content is protected !!