Saturday, June 13, 2026
Homeಕರಾವಳಿಮಂಗಳೂರುಮಂಗಳೂರು: ಬಿಜೆಪಿ ಸದಸ್ಯತ್ವ ಪಡೆದ ತುಳು ಕಲಾವಿದ ದೇವದಾಸ್ ಕಾಪಿಕಾಡ್

ಮಂಗಳೂರು: ಬಿಜೆಪಿ ಸದಸ್ಯತ್ವ ಪಡೆದ ತುಳು ಕಲಾವಿದ ದೇವದಾಸ್ ಕಾಪಿಕಾಡ್

- Advertisement -
- Advertisement -

ಮಂಗಳೂರು: ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ತುಳು ಕಲಾವಿದ ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದರು.

ಮಂಗಳೂರಿನಲ್ಲಿ ದೇವದಾಸ್ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಸದಸ್ಯತ್ವ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು.

ಅಲ್ಲದೇ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಯುವ ಮೋರ್ಛಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮಂಡಲ ಮಹಿಳಾ ಮೋರ್ಛಾ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಈ ಸಂದರ್ಭದಲ್ಲಿ ಹಾಜರಿದ್ದರು.

ತುಳು ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಕೂಡಾ ಉಪಸ್ಥಿತರಿದ್ದರು.

- Advertisement -

Latest News

error: Content is protected !!