Friday, June 5, 2026
Homeಕರಾವಳಿಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ರಂತಹ ನಾಯಕತ್ವದ ಅಗತ್ಯವಿದೆ: ಸುಳ್ಯದಲ್ಲಿ ಮಾಜಿ ಸಂಸದ ಪ್ರತಾಪಸಿಂಹ ಹೇಳಿಕೆ

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ರಂತಹ ನಾಯಕತ್ವದ ಅಗತ್ಯವಿದೆ: ಸುಳ್ಯದಲ್ಲಿ ಮಾಜಿ ಸಂಸದ ಪ್ರತಾಪಸಿಂಹ ಹೇಳಿಕೆ

- Advertisement -
- Advertisement -

ಸುಳ್ಯ: ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ರಂತಹ ನಾಯಕತ್ವದ ಅಗತ್ಯವಿದೆ ಎಂದು ಮಾಜಿ ಸಂಸದ ಪ್ರತಾಪಸಿಂಹ ಹೇಳಿದ್ದಾರೆ.

ಸುಳ್ಯದಲ್ಲಿ ಬುಧವಾರ ನಡೆದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಪ್ರತಾಪಸಿಂಹ, ಯೋಗಿ ಆದಿತ್ಯನಾಥ್ ರಂತಹ ನಾಯಕತ್ವವನ್ನು ಹಿಂದೂ ಸಂಘಟನೆಗಳು ಸೃಷ್ಟಿಸಬೇಕಾಗಿದೆ ಎಂದು ಹೇಳಿದ್ದಾರೆ.

ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆದ ಸಮಾರೋಪ ಸಮಾರಂಭವನ್ನು ಹಿರಿಯ ದೈವ ನರ್ತಕ ಕೇಪು ಅಜಿಲ ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಸಂಯೋಜಕ ಪುನೀತ್ ಅತ್ತಾವರ, ಮೊಸರು ಕುಡಿಕೆ ಸಮಿತಿ ಅಧ್ಯಕ್ಷ ಎ.ವಿ. ತೀರ್ಥರಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಮಾರೋಪ‌ ಸಮಾರಂಭದಕ್ಕೂ ಮುನ್ನ ಸುಳ್ಯ ನಗರದಲ್ಲಿ ಶೋಭಾಯಾತ್ರೆ ಮತ್ತು ಮಡಿಕೆ ಒಡೆಯುವ ಪ್ರದರ್ಶನ ನಡೆಯಿತು.

ಇದಕ್ಕೂ ಮುನ್ನ ಸುಳ್ಯಕ್ಕೆ ಆಗಮಿಸಿದ ಪ್ರತಾಪಸಿಂಹ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಬಿಜೆಪಿ ಮುಖಂಡರು ಸ್ವಾಗತಿಸಿದರು.

- Advertisement -

Latest News

error: Content is protected !!