Wednesday, June 3, 2026
Homeಕರಾವಳಿಬಂಟ್ವಾಳ: ಡಿವೈಡರ್ ಹಾರಿ ಬಸ್ ಗೆ ಕಾರು ಡಿಕ್ಕಿ: ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ಡಿವೈಡರ್ ಹಾರಿ ಬಸ್ ಗೆ ಕಾರು ಡಿಕ್ಕಿ: ನವ ವಿವಾಹಿತೆ ಸಾವು, ಪತಿ ಗಂಭೀರ

- Advertisement -
- Advertisement -

ಬಂಟ್ವಾಳ: ರಸ್ತೆ ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ತಲಪಾಡಿಯಲ್ಲಿ ಸಂಭವಿಸಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತಿ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೆಪ್ಟೆಂಬರ್ 5 ರಂದು ವಿವಾಹವಾಗಿದ್ದ ನವದಂಪತಿ
ಬಿ.ಸಿ. ರೋಡ್ ನಿಂದ ‌ಮಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆಎಸ್ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.

ಸೆಪ್ಟೆಂಬರ್ 5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿದ್ದು, ಮದುವೆ ವಿಚಾರವಾಗಿ ದೇವಸ್ಥಾನಕ್ಕೆ ಬಂದು ವಾಪಸ್ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಮೆಲ್ಕಾರ್ ‌ಸಂಚಾರ ಪೋಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!