Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ

ಮಂಗಳೂರು: ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ

- Advertisement -
- Advertisement -

ಮಂಗಳೂರು: ಮಂಗಳೂರು ನಗರದ ಸ್ಟೇಟ್‌ ಬ್ಯಾಂಕ್ ಬಸ್ ನಿಲ್ದಾಣ ಅಭಿವೃದ್ದಿಗೊಳ್ಳುತ್ತಿದ್ದು, ಅದರ ಶಂಕುಸ್ಥಾಪನೆ ನೆರವೇರಿದೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಶಂಕುಸ್ಥಾಪನೆ ನೆರವೇರಿಸಿದರು.

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಬಸ್ ನಿಲ್ದಾಣ ಅಭಿವೃದ್ಧಿಗೊಳ್ಳುತ್ತಿದ್ದು, ಬಸ್ ನಿಲ್ದಾಣದ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳಾದ ಶೌಚಾಲಯ, ಆಸನ, ಕುಡಿಯುವ ನೀರು ಮತ್ತು ವಿದ್ಯುತ್ ವ್ಯವಸ್ಥೆ ಒಳಗೊಂಡಿರಲಿದೆ.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಸುನೀತಾ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್, ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ, ಸಂದೀಪ್ ಗರೋಡಿ, ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಝ್ ಪರ್ತಿಪ್ಪಾಡಿ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!