Saturday, June 6, 2026
Homeಕರಾವಳಿಉಡುಪಿಉಡುಪಿ: ನೆಚ್ಚಿನ ಶಿಕ್ಷಕರ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು

ಉಡುಪಿ: ನೆಚ್ಚಿನ ಶಿಕ್ಷಕರ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು

- Advertisement -
- Advertisement -

ಉಡುಪಿ: ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ವೇಳೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಆಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕ ಹರ್ಕೂರು ಪ್ರವೀಣ್ ಕುಮಾರ್ ಶೆಟ್ಟಿ ವರ್ಗಾವಣೆಗೆ ಮಕ್ಕಳು ಕಣ್ಣೀರು ಹಾಕಿದ್ದಾರೆ.

ಹತ್ತು ವರ್ಷಗಳಿಂದ ಆಲೂರು ಪ್ರೌಢಶಾಲೆಯ ದೈಹಿಕ ಶಿಕ್ಷಕರಾಗಿ ಪ್ರವೀಣ್ ಕುಮಾರ್ ಶೆಟ್ಟಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳು ಮಾತ್ರವಲ್ಲದೇ ಗ್ರಾಮಸ್ಥರಿಗೂ ಅಚ್ಚುಮೆಚ್ಚಿನವರಾಗಿದ್ದರು.ಸದ್ಯ ಕುಂದಾಪುರ ತಾಲೂಕಿನ ಹೈಕಾಡಿ ಶಾಲೆಗೆ ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ ವರ್ಗಾವಣೆಯಾಗಿದ್ದಾರೆ.

ವರ್ಗಾವಣೆ ಹಿನ್ನೆಲೆಯಲ್ಲಿ ಆಲೂರು ಪ್ರೌಢಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು ಕಣ್ಣೀರಿಟ್ಟು ನೆಚ್ಚಿನ ಶಿಕ್ಷಕರಿಗೆ ಶುಭ ಕೋರಿದ್ದಾರೆ.

- Advertisement -

Latest News

error: Content is protected !!