Monday, June 8, 2026
Homeಉದ್ಯಮಆಳ್ವಾಸ್‌ನಲ್ಲಿ ನೂತನ ಕಾನೂನು ಕಾಲೇಜು ಆರಂಭ

ಆಳ್ವಾಸ್‌ನಲ್ಲಿ ನೂತನ ಕಾನೂನು ಕಾಲೇಜು ಆರಂಭ

- Advertisement -
- Advertisement -

ಮೂಡಬಿದ್ರಿ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನವು ಇದೀಗ ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜತೆಗೆ ನೂತನ ಕಾನೂನು ಕಾಲೇಜ್‌ ಅನ್ನು ಆರಂಭಿಸುತ್ತಿದೆ.

ಆಳ್ವಾಸ್‌ ಪ್ರವರ್ತಕ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ, ‘ಈ ಶೈಕ್ಷಣಿಕ ವರ್ಷದಿಂದಲೇ 5 ವರ್ಷಗಳ, ಬಿಕಾಂ ಸಹಿತ ಎಲ್‌ಎಲ್‌ಬಿ ಮತ್ತು 3 ವರ್ಷಗಳ ಎಲ್‌ಎಲ್‌ಬಿ ಕೋರ್ಸಿಗೆ ದಾಖಲಾತಿ ಆರಂಭವಾಗಿದೆ ಎಂದು,’ ತಿಳಿಸಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‌ಎಲ್‌ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್‌ಎಲ್‌ಬಿ ಪದವಿಯನ್ನು 60 ವಿದ್ಯಾರ್ಥಿ ಮಿತಿಯೊಂದಿಗೆ ಈ ವರ್ಷದಿಂದಲೇ ಆರಂಭಿಸಲು ಬಾರ್‌ ಕೌನ್ಸಿಲ್‌ ಆಫ್‌ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

ಕಾನೂನು ಶಿಕ್ಷಣದಲ್ಲಿ ಉತ್ತಮ ಅನುಭವ ಹೊಂದಿರುವ ಶಿಕ್ಷಕರನ್ನು ಈಗಾಗಲೇ ನೇಮಿಸಿದ್ದು, ಗುಣಾತ್ಮಕವಾದ ಕಾನೂನು ಶಿಕ್ಷಣವನ್ನು ನೀಡಲು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ನಿರ್ಧಾರಿಸಿದೆ. ದ್ವಿತೀಯ ಪಿಯುಸಿಯಲ್ಲಿ ವಾಣಿಜ್ಯ ಅಥವಾ ವಿಜ್ಞಾನ ಶಾಖೆಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಬಿಕಾಂ ಎಲ್‌ಎಲ್‌ಬಿ ಪ್ರವೇಶಾತಿಗೆ ಅರ್ಹರು. ಯಾವುದೇ ಪದವಿ ಪೂರ್ಣಗೊಳಿಸಿ ರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು 3 ವರ್ಷಗಳ ಎಲ್‌ಎಲ್‌ಬಿ ಪದವಿಗೆ ದಾಖಲಾತಿಗೆ ಅರ್ಹತೆ ಪಡೆಯುತ್ತಾರೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!