Friday, June 27, 2025
Homeಕರಾವಳಿಮಂಗಳೂರುಉಪ್ಪಿನಂಗಡಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ;ಪೋಕ್ಸೋ ಕಾಯ್ದೆಯಡಿ ಆರೋಪಿ ಅರೆಸ್ಟ್

ಉಪ್ಪಿನಂಗಡಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ;ಪೋಕ್ಸೋ ಕಾಯ್ದೆಯಡಿ ಆರೋಪಿ ಅರೆಸ್ಟ್

spot_img
- Advertisement -
- Advertisement -

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿ ಪಿಕಪ್ ವಾಹನದಲ್ಲಿ ಮೊಟ್ಟೆ ಸಾಗಾಟ ಮಾಡುವ(ಸುವರ್ಣ ಎಗ್ ಲೈನ್ಸ್) ಕೆಲಸ ಮಾಡಿಕೊಂಡಿರುವ ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ವಿವಾಹಿತನಾಗಿರುವ ಸತೀಶ್ ಸುವರ್ಣ (38) ಎಂಬಾತ ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು.21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ತು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಯುವತಿ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿರುತ್ತಾಳೆ.

- Advertisement -
spot_img

Latest News

error: Content is protected !!