Saturday, June 6, 2026
Homeಕರಾವಳಿಬಂಟ್ವಾಳ : ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ಕಳ್ಳತನ

ಬಂಟ್ವಾಳ : ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ಕಳ್ಳತನ

- Advertisement -
- Advertisement -

ಬಂಟ್ವಾಳ : ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ಕಳ್ಳತನ ಮಾಡಿರುವ ಘಟನೆ ಬಿ ಸಿ ರೋಡ್ ನಲ್ಲಿ ನಡೆದಿದೆ.ನಿವೃತ್ತ ಸೈನಿಕ ಅಂಬ್ರೋಸ್ ಡಿಸೋಜ ಅವರು ಬಿ.ಸಿ.ರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಪೆನ್ಶನ್ ಹಣವನ್ನು ಮೂರು ಅಥವಾ ನಾಲ್ಕು ತಿಂಗಳಿಗೊಮ್ಮೆ ಅವರ ಖಾತೆಯಿಂದ ತೆಗೆಯುತ್ತಿದ್ದರು.

ಅದರಂತೆ 50 ಸಾವಿರ ಹಣವನ್ನು ಬ್ಯಾಗ್‌ ನಲ್ಲಿ ಇರಿಸಿಕೊಂಡು ಬಿ.ಸಿ.ರೋಡಿನ ಎಸ್.ಬಿ.ಐ ಬ್ಯಾಂಕ್ ಗೆ ಬಂದಿದ್ದರು. ಇಲ್ಲಿನ ಇವರ ಖಾತೆಯಿಂದ 80 ಸಾವಿರ ಹಣವನ್ನು ಡ್ರಾ ಮಾಡಿ, ಒಟ್ಟು 1,30,000 ಹಣವನ್ನು ಒಂದೇ ಬ್ಯಾಗ್ ನಲ್ಲಿ ಹಾಕಿ ಬ್ಯಾಂಕ್ ನ ಟೇಬಲ್ ಮೇಲೆ ಇಟ್ಟು, ಪಾಸ್ ಬುಕ್ ಎಂಟ್ರಿ ಮಾಡಲು ಕೌಂಟರ್ ಬಳಿ ಹೋಗಿದ್ದರು. ಎಂಟ್ರಿ ಮಾಡಿಸಿ ವಾಪಸು ಟೇಬಲ್ ಕಡೆ ಬಂದಾಗ ಬ್ಯಾಗ್ ಅಲ್ಲಿರದೆ ಕಾಣೆಯಾಗಿತ್ತು.

ಕಳವಾದ ಬ್ಯಾಗ್‌ ಬಿ.ಸಿ.ರೋಡು ಸಮೀಪದ ಕೈಕುಂಜೆ ರಸ್ತೆಯಲ್ಲಿ ಸಿಕ್ಕಿದ್ದು, ಅದರಲ್ಲಿ ದಾಖಲೆ ಪತ್ರಗಳು ಮಾತ್ರ ಇದ್ದು ನಗದು ಲಪಟಾಯಿಸಿದ್ದಾರೆ ಎಂದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!