- Advertisement -
- Advertisement -
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಬಡಗುತಿಟ್ಟು ಯಕ್ಷಗಾನ ಕಲಾವಿದರು ಹಾಗೂ ಯಕ್ಷ ಕಲಾಕೇಂದ್ರದ ಗುರುಗಳಾದ ಬನ್ನಂಜೆ ಸಂಜೀವ ಸುವರ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ ತಲ್ಲೂರು ಶಿವರಾಮ್ ಶೆಟ್ಟಿ ಅವರು ಸೆ.14 ಶನಿವಾರದಂದು ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಬಡಗುತಿಟ್ಟು ಯಕ್ಷಗಾನ ಕಲಾವಿದರು ಹಾಗೂ ಯಕ್ಷ ಕಲಾಕೇಂದ್ರದ ಗುರುಗಳಾದ ಗುರು ಸುವರ್ಣ ಎಂದೇ ಖ್ಯಾತರಾದ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿಗೆ ನೀಡಲಾಗುವುದು. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಿಗೆ ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಗುವುದು ಎಂದು ವಿವರಿಸಿದರು.
- Advertisement -