ಘಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಬಾಲಕನೋರ್ವ ಹಣ್ಣಿನ ಜ್ಯೂಸ್ ನಲ್ಲಿ ಮೂತ್ರವನ್ನು ಬೆರೆಸಿ ಗ್ರಾಹಕರಿಗೆ ನೀಡಲಾಗುತ್ತಿದ್ದ ಆರೋಪದಡಿಯಲ್ಲಿ ಆತನನ್ನು ಸೆ.14 ಶುಕ್ರವಾರದಂದು ಪೊಲೀಸರು ಬಂಧಿಸಿದ್ದಾರೆ.
ಬಂಧನಕ್ಕೊಳಗಾದ ಜ್ಯೂಸ್ ವ್ಯಾಪಾರಿಯು 15 ವರ್ಷದ ಬಾಲಕ ಆಮಿರ್ ಎಂದು ಗುರುತಿಸಲಾಗಿದೆ.
ಗ್ರಾಹಕರಿಗೆ ಹಣ್ಣಿನ ರಸದಲ್ಲಿ ಜ್ಯೂಸ್ ಮಾರಾಟಗಾರ ಮಾನವ ಮೂತ್ರವನ್ನು ಬೆರೆಸಿ ನೀಡುತ್ತಿದ್ದ ಬಗ್ಗೆ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಮಾಹಿತಿಯ ಆಧಾರದಲ್ಲಿ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಆತನ ಅಂಗಡಿಯಲ್ಲಿ ಕ್ಯಾನ್ ನಲ್ಲಿ ಸಂಗ್ರಹಿಸಿದ್ದ ಮಾನವ ಮೂತ್ರವನ್ನು ಪತ್ತೆ ಮಾಡಲಾಗಿದೆ ಎಂದು ಎಸಿಪಿ ಅಂಕುರ್ ವಿಹಾರ್ ಭಾಸ್ಕರ್ ವರ್ಮಾ ತಿಳಿಸಿದ್ದಾರೆ.
ಮೂತ್ರ ತುಂಬಿದ ಕಂಟೇನರ್ ಬಗ್ಗೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಯಾವುದೇ ಮಾಹಿತಿ ನೀಡಿಲ್ಲ. ಈ ಘಟನೆಯ ಕುರಿತು ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.


