Sunday, June 7, 2026
Homeಕರಾವಳಿಮಂಗಳೂರುಬಂಟ್ವಾಳ: ಸ್ವಾತಂತ್ರ್ಯೋತ್ಸವಕ್ಕೆ ಪ್ರಧಾನಿ ಕಚೇರಿಯಿಂದ ಆಹ್ವಾನಿತರಾಗಿದ್ದ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಅವ್ಯವಹಾರ ಆರೋಪ

ಬಂಟ್ವಾಳ: ಸ್ವಾತಂತ್ರ್ಯೋತ್ಸವಕ್ಕೆ ಪ್ರಧಾನಿ ಕಚೇರಿಯಿಂದ ಆಹ್ವಾನಿತರಾಗಿದ್ದ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಅವ್ಯವಹಾರ ಆರೋಪ

- Advertisement -
- Advertisement -

ಬಂಟ್ವಾಳ: ಪ್ರಧಾನಮಂತ್ರಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ ಕೇಳಿ ಬಂದಿದೆ.

ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ವಿರುದ್ಧ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.

ಆಗಸ್ಟ್ 15 ರಂದು ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನ ಮಂತ್ರಿ ಕಚೇರಿಯಿಂದ ಆಹ್ವಾನ ಪಡೆದಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ, ದೆಹಲಿಗೆ ಪ್ರಯಾಣ ಮಾಡಿದ ವೆಚ್ಚದಲ್ಲಿ ಅವ್ಯವಹಾರ ನಡೆದಿದೆ ಎಂದು ಗ್ರಾಮಸ್ಥರಿಂದ ಆರೋಪ ವ್ಯಕ್ತವಾಗಿದೆ.

ತಮ್ಮ ವಿರುದ್ಧದ ಗ್ರಾಮಸ್ಥರ ಆರೋಪಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ, ಹೆಣ್ಣು ಎಂಬ ಕಾರಣಕ್ಕೆ ತಮ್ಮ ತೇಜೋವಧೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಪಂಚಾಯತ್ ನಲ್ಲಿ ಒಂದು ರೂಪಾಯಿ ಅವ್ಯವಹಾರ ಸಾಬೀತಾದರೂ ರಾಜೀನಾಮೆ ನೀಡುವುದಾಗಿ ಸವಾಲು ಹಾಕಿದ್ದಾರೆ.

ದೆಹಲಿಗೆ ತೆರಳಲು ಗ್ರಾಮ ಪಂಚಾಯತ್ ಹಣ ಖರ್ಚು ಮಾಡಿದ್ದಾರೆ ಎಂದು ಕೆಲವು ಗ್ರಾಮಸ್ಥರು ಆರೋಪ ಮಾಡಿದ್ದು, ವೆಚ್ಚವನ್ನು ಸರ್ಕಾರ ಭರಿಸಲಿದ್ದು, ಜಿಲ್ಲಾ ಪಂಚಾಯತ್‌ನಿಂದ ಮರುಪಾವತಿಯಾಗಲಿದೆ ಎಂದು ಪಂಚಾಯತ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಸಭೆಯಲ್ಲಿ ನೀಡಲಾಗಿದ್ದ ಗ್ರಾಮ ಪಂಚಾಯತ್ ಖರ್ಚು ವೆಚ್ಚದ ಪತ್ರದಲ್ಲಿ ಹಲವು ಕ್ರಮ ಸಂಖ್ಯೆ ಕಾಣೆಯಾಗಿದ್ದ ಕಾರಣ ಗ್ರಾಮಸ್ಥರು ಕೇಳಿದ ಪ್ರಶ್ನೆಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡದಿದ್ದ ಕಾರಣ ಸಭೆಯಲ್ಲಿ ಮಾತಿನ ಜಟಾಪಟಿ ಏರ್ಪಟ್ಟಿದೆ.

- Advertisement -

Latest News

error: Content is protected !!