Friday, June 5, 2026
Homeಕರಾವಳಿಉಡುಪಿಉಡುಪಿ: ಬಿಜೆಪಿ ಶಾಸಕರ ಬೆಂಬಲ ಕೋರಿದ್ರಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ?; ವೈರಲ್ ಆದ...

ಉಡುಪಿ: ಬಿಜೆಪಿ ಶಾಸಕರ ಬೆಂಬಲ ಕೋರಿದ್ರಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ?; ವೈರಲ್ ಆದ ಯಶಪಾಲ್ ಸುವರ್ಣ ಮತ್ತು ಅರ್ಜುನ್ ನಾಯಿರಿ ಭೇಟಿ ಫೋಟೋ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಬಿಜೆಪಿ ಶಾಸಕರನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ ಎಂಬ ವಿಚಾರ ಉಡುಪಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಅವರನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿರುವ ಅರ್ಜುನ್ ನಾಯರಿ ಕೆಲವು ದಿನಗಳ ಹಿಂದೆ ಭೇಟಿ ಮಾಡಿದ್ದು, ಬೆಂಬಲ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಶಾಸಕರ ಜೊತೆ ಯುವ ಕಾಂಗ್ರೆಸ್ ಚುನಾವಣಾ ಅಭ್ಯರ್ಥಿ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾಮಪತ್ರ ಸಲ್ಲಿಕೆ ಬಳಿಕ ಅರ್ಜುನ್ ನಾಯಿರಿ ಶಾಸಕ ಯಶಪಾಲ್ ಸುವರ್ಣ ಅವರನ್ನು ಭೇಟಿ ಮಾಡಿದ್ದಾರೆ.

ಒಟ್ಟು ಐದು ಮಂದಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಾ ಕಣದಲ್ಲಿದ್ದು, ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಅರ್ಜುನ್ ನಾಯಿರಿ ಬಿಜೆಪಿ ಶಾಸಕರ ಬೆಂಬಲ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!