Wednesday, June 3, 2026
Homeಕರಾವಳಿಉಡುಪಿಉಡುಪಿಯಲ್ಲಿ ಪೊಲೀಸ್ ಅಧಿಕಾರಿ ಹೃದಯಾಘಾತಕ್ಕೆ ಬಲಿ

ಉಡುಪಿಯಲ್ಲಿ ಪೊಲೀಸ್ ಅಧಿಕಾರಿ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಉಡುಪಿ; ಪೊಲೀಸ್ ಅಧಿಕಾರಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.  ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್‌ ರೂಮ್‌ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಮೃತ ದುರ್ದೈವಿ.

ನಿತ್ಯಾನಂದ ಅವರು ಸೋಮವಾರ ಬೆಳಗ್ಗಿನ  ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಶಿಫ್ಟ್  ಮುಗಿಸಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ಊಟದ ನಂತರ ಮಲಗಿದ್ದ ಇವರು ಬೆಳಗ್ಗೆ ನೋಡಲಾಗಿ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ನಿತ್ಯಾನಂದ ಶೆಟ್ಟಿ ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ ಕಂಟ್ರೋಲ್‌ ರೂಮ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಕರಾವಳಿ ಕಾವಲುಪಡೆಯಲ್ಲಿ ಸೇವೆ ಸಲ್ಲಿಸಿದ್ದರು. ನಿತ್ಯಾನಂದ ಶೆಟ್ಟಿ ಅವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

- Advertisement -

Latest News

error: Content is protected !!