- Advertisement -
- Advertisement -
ಬೆಳ್ತಂಗಡಿ: ರೆಖ್ಯಾ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಳೆಯಿಂದಾಗಿ ಹಾನಿ ಸಂಭವಿಸಿದ್ದನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪರಿಶೀಲಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ, ಹಾನಿಯ ಪ್ರಮಾಣವನ್ನು ಪರಿಶೀಲಿಸಿ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಕಳೆದ ತಿಂಗಳು ಸುರಿದಿದ್ದ ಭಾರಿ ಮಳೆಗೆ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿದು ದೇವಸ್ಥಾನದ ಪ್ರಾಂಗಣದೊಳಗೆ ಮಣ್ಣು ತುಂಬಿ ಗರ್ಭಗುಡಿಗೆ ಹಾನಿ ಉಂಟಾಗಿತ್ತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಕೂಡಾ ಉಪಸ್ಥಿತರಿದ್ದರು.
- Advertisement -