Friday, June 5, 2026
Homeತಾಜಾ ಸುದ್ದಿವಿಧಾನ ಪರಿಷತ್ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ

ವಿಧಾನ ಪರಿಷತ್ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ

- Advertisement -
- Advertisement -

ನವದೆಹಲಿ: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದೆ.

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೀಡಿದ್ದ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 3 ಕೊನೆಯ ದಿನವಾಗಿದ್ದು, ಅಕ್ಟೋಬರ್ 21 ರಂದು ಮತದಾನ ನಡೆಯಲಿದೆ.ಅಕ್ಟೋಬರ್ 24 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

ದಕ್ಷಿಣ ‌ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಸದಸ್ಯರಾಗಿ ಮಂಜುನಾಥ ಭಂಡಾರಿ ಮತ್ತು ಬಿಜೆಪಿ ಸದಸ್ಯರಾಗಿ ಕೋಟ ಶ್ರೀನಿವಾಸ ಪೂಜಾರಿ ಅಯ್ಕೆಯಾಗಿದ್ದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ್ದರು.

- Advertisement -

Latest News

error: Content is protected !!