ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದ ಅಡಿ ಜೈಲು ಸೇರಿದ್ದ ಶಾಸಕ ಮುನಿರತ್ನಗೆ ಬೆಂಗಳೂರಿನ 42ನೇ ACMM ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಒಂದು ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿದೆ.
ಅಟ್ರಾಸಿಟಿ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, 2, ಲಕ್ಷ ಬಾಂಡ್ ಇಬ್ಬರು ಶೂರಿಟಿ ಒದಗಿಸುವಂತೆ ಷರತ್ತು ವಿಧಿಸಿ ಶಾಸಕ ಮುನಿರತ್ನಗೆ 42ನೇ ACMM ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಾಕ್ಷಾಧಾರ ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ. ಸದ್ಯ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಮುನಿರತ್ನ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಗುತ್ತಿಗೆದಾರ ಚೆಲುವರಾಜು ಮುನಿರತ್ನ ಅವರು ನನಗೆ ಜೀವ ಬೆದರಿಕೆ ಹಾಕಿ ಅಲ್ಲದೆ ಜಾತಿ ನಿಂದನೆ ಕೂಡ ಮಾಡಿದ್ದರು ಎಂದು ಆರೋಪಿಸಿದ್ದರು ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಇತ್ತೀಚಿಗೆ ಬಂಧಿಸಿದ್ದರು. ಇಂದು ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.