Saturday, June 6, 2026
Homeತಾಜಾ ಸುದ್ದಿಬೆಳಗಾವಿಯಲ್ಲಿ ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ವೈದ್ಯರು; ಕೊಳಲು ಊದುವಾಗಲೇ ಯಶಸ್ವಿಯಾಗಿ ಮೆದುಳು ಶಸ್ತ್ರಚಿಕಿತ್ಸೆ

ಬೆಳಗಾವಿಯಲ್ಲಿ ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ವೈದ್ಯರು; ಕೊಳಲು ಊದುವಾಗಲೇ ಯಶಸ್ವಿಯಾಗಿ ಮೆದುಳು ಶಸ್ತ್ರಚಿಕಿತ್ಸೆ

- Advertisement -
- Advertisement -

ಬೆಳಗಾವಿಯಲ್ಲಿ ವೈದ್ಯಕೀಯ ಲೋಕಕ್ಕೆ ವೈದ್ಯರು ಅಚ್ಚರಿ ಮೂಡಿಸಿದದ್ದಾರೆ.  ರೋಗಿ ಕೊಳಲು ಊದುವಾಗಲೇ ಯಶಸ್ವಿಯಾಗಿ ಮೆದುಳು ಶಸ್ತ್ರಚಿಕಿತ್ಸೆ  ಮಾಡಿದ್ದಾರೆ ವೈದ್ಯರು.

ಕೊಲ್ಲಾಪುರದ ಕನೇರಿ ಮಠದ ಸಿದ್ದಗಿರಿ ಆಸ್ಪತ್ರೆಯ ವೈದ್ಯರು ರೋಗಿಯ ಕೈಗೆ ಕೊಳಲು ಕೊಟ್ಟು, ರೋಗಿ ಕೊಳಲು ಊದುವಾಗಲೇ ಯಶಸ್ವಿಯಾಗಿ ಮೆದುಳು ಶಸ್ತ್ರಚಿಕಿತ್ಸೆ ಮಾಡಿಸುವ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ.

ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಕ ಡಾ. ಶಿವಶಂಕ‌ರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡ ಅವರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ವೈದ್ಯ ಲೋಕ ಅಚ್ಚರಿಯಿಂದ ತಮ್ಮತ್ತ ನೋಡುವಂತೆ ಮಾಡಿದ್ದಾರೆ. ರೋಗಿಗೆ ಯಾವುದೇ ತೊಂದರೆ ಆಗದಂತೆ, ಆರಾಮವಾಗಿ ಕೊಳಲು ಊದುತ್ತಾ ಮಲಗಿರುವಾಗಲೇ ಶಸ್ತ್ರಚಿಕಿತ್ಸೆ ಮಾಡಿದ್ದು, ಎಲ್ಲರ ಗಮನ ಸೆಳೆದಿದೆ.

ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ರೋಗಿ ಎಚ್ಚರ ಇರುವಾಗಲೇ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದು ಇಡೀ ಏಷಿಯಾದಲ್ಲೆ ಯಾರೂ ಮಾಡಿಲ್ಲ. ಅಂಥ ವಿಶಿಷ್ಟ ದಾಖಲೆಗೆ ನಮ್ಮ ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆ ಪಾತ್ರವಾಗಿದೆ. ರೋಗಿಯ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಕೊಳಲು ಊದುವಾಗ, ಐಸ್ ಕ್ರೀಮ್ ತಿನ್ನುವಾಗ ಆಪರೇಶನ್ ಮಾಡಲಾಗಿದೆ ಎಂದಿದ್ದಾರೆ.

- Advertisement -

Latest News

error: Content is protected !!