- Advertisement -
![]()
- Advertisement -
ಬೆಂಗಳೂರು: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವ ಶಾಕಿಂಗ್ ವಿಚಾರ ದೃಢವಾಗುತ್ತಿದ್ದಂತೆ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಖಡಕ್ ಆದೇಶ ನೀಡಿದೆ.
ಈ ಬಗ್ಗೆ ಇಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀವಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ.
- Advertisement -


