Thursday, June 4, 2026
Homeಅಪರಾಧಸುಪ್ರೀಂ ಕೋರ್ಟ್ ನಿಂದ ಹೈಕೋರ್ಟ್ ಜಡ್ಜ್ ವಿರುದ್ಧ ಸುಮೊಟೋ ಕೇಸ್

ಸುಪ್ರೀಂ ಕೋರ್ಟ್ ನಿಂದ ಹೈಕೋರ್ಟ್ ಜಡ್ಜ್ ವಿರುದ್ಧ ಸುಮೊಟೋ ಕೇಸ್

- Advertisement -
- Advertisement -

ಸುಪ್ರೀಂಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿ ವಿ .ಶ್ರೀಷಾನಂದ ವಿರುದ್ಧ ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ ವಿಚಾರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾದ ಬೆನ್ನಲೇ ಶುಕ್ರವಾರ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ

ಪಂಚ ಸದಸ್ಯರ ಪೀಠವು ಈ ವಿವಾದದ ಸಂಬಂಧ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿದೆ.

ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್.ಗವಾಯಿ, ಸೂರ್ಯಕಾಂತ್ ಹಾಗೂ ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಪಂಚಸದಸ್ಯ ಪೀಠ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಪ್ರಕರಣ ಸಂಬಂಧ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಾಯವನ್ನೂ ಬಯಸಿದೆ ಎಂದು ತಿಳಿದು ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆಗೆ ಒಳಗಾಗುತ್ತಿರುವ ವೀಡಿಯೊದಲ್ಲಿ ಪ್ರತಿವಾದಿ ವಕೀಲರೊಬ್ಬರಿಗೆ ಪ್ರಶ್ನೆ ಕೇಳುತ್ತಿದ್ದಾಗ ಮಹಿಳಾ ವಕೀಲರೊಬ್ಬ ಮಧ್ಯಪ್ರವೇಶಿಸಿದ್ದಾರೆ. ಈ ಸಂದರ್ಭದಲ್ಲಿ ಜಡ್ಜ್ ಅವರನ್ನು ನಿರ್ದಾಕ್ಷಿಣ್ಯವಾಗಿ ಟೀಕಿಸಿದ್ದಾರೆ. ಅವರ ಬಗ್ಗೆ ಎಂದರೆ ಎದುರು ಪಕ್ಷದ ಬಗ್ಗೆ ನಿಮಗೆ ಪೂರ್ತಿ ಗೊತ್ತಿದೆ! ನಾಳೆ ಬೆಳಗ್ಗೆ ಕೇಳಿದರೆ ಇನ್ನೇನಾದರೂ ಹೇಳುತ್ತೀರಿ. ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂದೂ ಹೇಳುತ್ತೀರಿ ಎಂದು ವಕೀಲೆಗೆ ಕಟುವಾಗಿ ಹೇಳಿದ್ದರು. ಈ ವಿಚಾಋ ಸಾಮಾಜಿಕ ಮಾಧ್ಯಮ ಮಾತ್ರವಲ್ಲದೆ, ವಕೀಲ ವೃಂದದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಇನ್ನು ಇಂತಹ ಕಲಾಪವನ್ನು ಸೃಷ್ಟಿಸಿರುವ ಶ್ರೀಷಾನಂದ ಅವರ ಹೈಕೋರ್ಟ್ ಲೈವ್ ಸ್ಟ್ರೀಮಿಂಗ್ ಅನ್ನು ಕೆಲವು ದಿನಗಳವರೆಗೆ ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿಗೆ ಪತ್ರ ಬರೆದಿದೆ. ನ್ಯಾಯಮೂರ್ತಿ ಶ್ರೀಷಾನಂದ ಅವರು ವ್ಯಕ್ತಪಡಿಸಿದ ಅಭಿಪ್ರಾಯವು ಗಂಭೀರ ವಿವಾದ ಸೃಷ್ಟಿಸಿದ್ದು, ಬೆಂಗಳೂರಿನ ವಕೀಲರ ಸಂಘವು ಈ ಕಲಾಪದ ಬಗ್ಗೆ(ಎಎಬಿ) ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನು ಎಎಬಿ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಕಾರ್ಯದರ್ಶಿ ಟಿ.ಜಿ ರವಿ ಮತ್ತು ಖಜಾಂಚಿ ಎಂ.ಟಿ ಹರೀಶ್ ಅವರು ಸಹಿ ಮಾಡಿರುವ ಪತ್ರದಲ್ಲಿ, ನ್ಯಾಯಮೂರ್ತಿಗಳ ಹೇಳಿಕೆಯಿಂದ ವಕೀಲ ವೃತ್ತಿಯನ್ನು ಪರಿಶುದ್ಧ ಎಂದು ಪರಿಗಣಿಸಿರುವ ಹಿರಿ-ಕಿರಿಯರೆನ್ನದೇ ಎಲ್ಲ ವಕೀಲರ ಭಾವನೆಗಳಿಗೂ ನೋವುಂಟಾಗಿದೆ. ಇಂಥ ಹೇಳಿಕೆಗಳಿಗೆ ವಕೀಲರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಎಂದು ವಿವರಿಸಲಾಗಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಹೇಳಿಕೆಗಳನ್ನೊಳಗೊಂಡ ಎರಡು ವಿಡಿಯೋಗಳು ವೈರಲ್ ಆಗಿದ್ದು, ಒಂದು ವಿಡಿಯೋದಲ್ಲಿ ನಗರದ ಗೋರಿಪಾಳ್ಯದ ಮುಸ್ಲಿಂ ಬಾಹುಳ್ಯ ಇರುವ ಪ್ರದೇಶವನ್ನು ‘ಪಾಕಿಸ್ತಾನ’ ಎಂದು ಕರೆದಿದ್ದಾರೆ. ಮೈಸೂರು ರಸ್ತೆಯ ಮೇಲ್ಸೆತುವೆ ಸಾಗುವ ಗೋರಿಪಾಳ್ಯದಿಂದ ಮಾರುಕಟ್ಟೆಯವರೆಗಿನ ಪ್ರದೇಶ ಭಾರತದಲ್ಲಿ ಇಲ್ಲ. ಅದು ಪಾಕಿಸ್ತಾನದಲ್ಲಿದೆ. ಅಷ್ಟೇ ಅಲ್ಲದೇ ಇದೇ ವಾಸ್ತವ.. ವಾಸ್ತವ.. ಎಂತಹುದೇ ಕಟ್ಟುನಿಟ್ಟಿನ ದಕ್ಷ ಪೊಲೀಸ್ ಅಧಿಕಾರಿಯನ್ನು ಅಲ್ಲಿಗೆ ಕರ್ತವ್ಯಕ್ಕೆ ನಿಯೋಜನೆ ಮಾಡಿದರೂ ಅವರನ್ನು ಹಿಡಿದುಬಿಡಲಿ ನೋಡುತ್ತೇನೆ ಎನ್ನುವ ವಿಚಾರಗಳು ವೈರಲ್‌ ಆಗುತ್ತಿದೆ.

- Advertisement -

Latest News

error: Content is protected !!