Saturday, June 13, 2026
Homeಕರಾವಳಿಮಂಗಳೂರುವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

- Advertisement -
- Advertisement -

ಚಿತ್ರದುರ್ಗ : ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.ಪ್ರಚೋದನಕಾರಿ ಭಾಷಣ ಹಿನ್ನೆಲೆ ವಿಶ್ವ ಹಿಂದೂ ಪರಿಷತ್  ಪ್ರಾಂತ ಸಹ ಕಾರ್ಯದರ್ಶಿಯಾದ ಶರಣ್ ಪಂಪ್ವೆಲ್ ಗೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.

ವಿ ಎಚ್ ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಇಂದು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಹಿಂದೂ ಮಹಾ ಗಣಪತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಆದರೆ ಪ್ರಚೋದನಾಕಾರಿ ಭಾಷಣ ಹಿನ್ನೆಲೆಯಲ್ಲಿ ಇದೀಗ ಅವರಿಗೆ ಚಿತ್ರದುರ್ಗಕ್ಕೆ ನಿರ್ಬಂಧ ಹೇರಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಅವರನ್ನು ಚಿತ್ರದುರ್ಗ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!