Saturday, June 6, 2026
Homeತಾಜಾ ಸುದ್ದಿಸಿಎಂ ವಿರುದ್ಧದ ಮುಡಾ ಹಗರಣ; ಇಂದು ನಿರ್ಧಾರವಾಗಲಿದೆ ಸಿದ್ದರಾಮಯ್ಯ ಭವಿಷ್ಯ

ಸಿಎಂ ವಿರುದ್ಧದ ಮುಡಾ ಹಗರಣ; ಇಂದು ನಿರ್ಧಾರವಾಗಲಿದೆ ಸಿದ್ದರಾಮಯ್ಯ ಭವಿಷ್ಯ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧಪಟ್ಟಂತೆ ಇವತ್ತು ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರವಾಗಲಿದೆ.  ಈಗಾಗಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ನಂತ್ರ, ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.

ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ಅದರಂತೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ.ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದಾರೆ. ಸದ್ಯ ರಾಜ್ಯದ ಜನರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ.

- Advertisement -

Latest News

error: Content is protected !!