Saturday, June 6, 2026
Homeಕರಾವಳಿಉಡುಪಿಉಡುಪಿಯಲ್ಲಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ನಿರ್ಮಾಪಕ

ಉಡುಪಿಯಲ್ಲಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ನಿರ್ಮಾಪಕ

- Advertisement -
- Advertisement -

ಉಡುಪಿ: ಡೆತ್ ನೋಟ್ ಬರೆದಿಟ್ಟು  ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ  ಸಿನಿಮಾ ನಿರ್ಮಾಪಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಗೇಶ್ ಕುಮಾರ್ (64) ನೇಣಿಗೆ ಶರಣಾದ ನಿರ್ಮಾಪಕ. ಮೃತ ನಾಗೇಶ್ ಕುಮಾರ್ ಚಲನಚಿತ್ರ ನಿರ್ದೇಶನಕ್ಕೆ 28 ಲಕ್ಷ ಹೂಡಿಕೆ ಮಾಡಿದ್ದರು.

ಭೂಮಿಕ ಪ್ರೊಡಕ್ಷನ್’ ಹೆಸರಿನ ಭರತ್ ನಾವುಂದ ನಿರ್ದೇಶನದ ಚಲನಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದರು. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ನಿರ್ಮಾಪಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀಜಾಡಿ ಗ್ರಾಮದ ಲಕ್ಷ್ಮೀ ಗ್ಲಾಸ್ ಪ್ಲೈವುಡ್ ಅಂಗಡಿ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಾಗೇಶ್ ಡೆತ್‍ನೋಟ್ ಬರೆದಿಟ್ಟಿದ್ದಾರೆ. “ನನ್ನನ್ನು ಕ್ಷಮಿಸಿ. ಎಲ್ಲರಿಗೂ ಒಳ್ಳೆಯದಾಗಲಿ. ನನ್ನ ಸಾವಿಗೆ ಯಾರೂ ಕಾರಣರಲ್ಲ” ಎಂದು ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ. ಇನ್ನು ಸ್ಥಳಕ್ಕೆ ಕುಂದಾಪುರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕೊರೋನಾ ಲಾಕ್‍ಡೌನ್, ಆರ್ಥಿಕ ನಷ್ಟದಿಂದ ಮೃತ ವ್ಯಕ್ತಿ ಮಾನಸಿಕವಾಗಿ ಜರ್ಜರಿತವಾಗಿದ್ದರು ಎನ್ನಲಾಗಿದೆ

- Advertisement -

Latest News

error: Content is protected !!