Thursday, June 4, 2026
Homeಕರಾವಳಿಆಂಬ್ಯುಲೆನ್ಸ್ ನಲ್ಲಿ ರೋಗಿಯನ್ನು ಪುತ್ತೂರಿನಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಅಪಘಾತ; ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವು

ಆಂಬ್ಯುಲೆನ್ಸ್ ನಲ್ಲಿ ರೋಗಿಯನ್ನು ಪುತ್ತೂರಿನಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಅಪಘಾತ; ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವು

- Advertisement -
- Advertisement -

ಮಂಗಳೂರು; ಆಂಬ್ಯುಲೆನ್ಸ್ ನಲ್ಲಿ ರೋಗಿಯನ್ನು ಪುತ್ತೂರಿನಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಅಪಘಾತವಾಗಿ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲು ಸಮೀಪ ನಡೆದಿದೆ. ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಮೃತ ವ್ಯಕ್ತಿ. ಘಟನೆಯಲ್ಲಿ ದಾಸಪ್ಪ ರೈ ಅವರ ಪತ್ನಿ ಪತ್ನಿ ನಳಿನಿ ರೈ, ಪುತ್ರ ಹರ್ಷಿತ್(33) ಹಾಗೂ ಸಂಬಂಧಿ ಯುವಕ ಮನೀಷ್(24)ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಡಬದ  ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ, ರಮೇಶ್ ರೈ ಎಂಬವರು ತನ್ನ ಕಾರಿನಲ್ಲಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕರೆತಂದಿದ್ದರು.

ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾಸಪ್ಪ ರೈ ಅವರನ್ನು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಇನ್ನೋವಾ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು. ಮುಂಜಾನೆ 4 ಗಂಟೆ ವೇಳೆಗೆ ಆಂಬುಲೆನ್ಸ್ ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ಆಂಬುಲೆನ್ಸ್‌ ನಲ್ಲಿದ್ದ ರೋಗಿ ದಾಸಪ್ಪ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!